Saturday, April 20, 2024
spot_imgspot_img
spot_imgspot_img

ಬೆಳ್ತಂಗಡಿ: ಬ್ಲಾಕ್ ಫಂಗಸ್ ನಿಂದ ವ್ಯಕ್ತಿ ಸಾವು!

- Advertisement -G L Acharya panikkar
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೂ ಲಗ್ಗೆ ಇಟ್ಟ ಬ್ಲಾಕ್ ಫಂಗಸ್ ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ.

ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಎಂಬವರು ಬ್ಲ್ಯಾಕ್ ಫಂಗಸ್ ವೈರಸ್‌ಗೆ ತುತ್ತಾಗಿ ಮೃತಪಟ್ಟಿದ್ದಾರೆನ್ನಲಾಗಿದೆ.

ನೋಣಯ್ಯ ಪೂಜಾರಿಯವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ಇವರಿಗೆ ಕೊರೊನಾ ಸೋಂಕು ದೃಢಗೊಂಡಿದ್ದು, ಅದರ ಜೊತೆಗೆ ಬ್ಲ್ಯಾಕ್ ಫಂಗಸ್ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೇ.27ರಂದು ಕೊನೆಯುಸಿರೆಳೆದಿದ್ದಾರೆ.

ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಲಾಗುತ್ತಿದೆ. ಇದೀಗ ಬ್ಲಾಕ್ ಫಂಗಸ್ ವೈರಸ್ ಕೂಡ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ. ಚಾರ್ಮಾಡಿ, ನೆರಿಯಾ, ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದಾರೆ.

ಸೇವಾ ಭಾರತಿ ಶ್ರಮಿಕ ಕೇಂದ್ರ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ವಿಶ್ವಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

- Advertisement -

Related news

error: Content is protected !!