- Advertisement -
- Advertisement -





ಬೆಳ್ತಂಗಡಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ನೊಂದುಕೊಂಡು ಅಪ್ರಾಪ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಸತೀಶ್ ಗೌಡ ಕೆ(43) ಅವರ ಸಂಬಂಧಿಕನಾದ ಅಪ್ರಾಪ್ತ ಬಾಲಕ ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಬಗ್ಗೆ ಮನನೊಂದು ಆ.30 ರಂದು ಬೆಳಿಗ್ಗೆ ಆತ ತನ್ನ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 64/2026, ಕಲಂ: 194 ಭಾ.ನಾ.ಸು.ಸಂ. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ..
- Advertisement -








