Tuesday, April 30, 2024
spot_imgspot_img
spot_imgspot_img

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ಪ್ರಮೀಳಾ (37) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ.

ಮಾರ್ಚ್ 26 ರ ರಾತ್ರಿಯಿಂದ 29ರ ಬೆಳಗಿನ ಅವಧಿಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ ಪ್ರಮೀಳಾ ಹಾಗೂ ಆಕೆಯ ಮಗಳ ಸುಮಾರು 43 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವುಗೈಯಲಾಗಿದೆ. ಕಳವಾಗಿರುವ ಸೊತ್ತುಗಳ ಮೌಲ್ಯ ಸುಮಾರು 2.15 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!