Sunday, June 7, 2026
spot_imgspot_img
spot_imgspot_img

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಗು ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಎಂದು ಗುರುತಿಸಲಾಗಿದೆ.

ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು, ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ. ಈ ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದಾರೆ.

- Advertisement -

Related news

error: Content is protected !!