Friday, April 26, 2024
spot_imgspot_img
spot_imgspot_img

ಬೆಳ್ತಂಗಡಿ: ಪ್ರವಾಹ,ನೆರೆ ಪರಿಹಾರದ ಲೆಕ್ಕ ಕೊಡಿ- ಹರೀಶ್ ಪೂಂಜ ಕಚೇರಿ ಮುಂಭಾಗ ಕಾಂಗ್ರೆಸ್ ಪ್ರತಿಭಟನೆ.

- Advertisement -G L Acharya panikkar
- Advertisement -

ಬೆಳ್ತಂಗಡಿ : ನೆರೆ ಪರಿಹಾರ ನಿಧಿಯನ್ನು ಬಿಜೆಪಿ ದುರ್ಬಳಕೆ ಮಾಡಿದ್ದು ಕೂಡಲೇ ಜನರಿಗೆ ಲೆಕ್ಕ ನೀಡಬೇಕೆಂದು ಆಗ್ರಹಿಸಿ ಮಾಜಿ ಶಾಸಕ ವಸಂತ ಬಂಗೇರ ಹಾಗೂ ರಂಜನ್ ಜಿ.ಗೌಡ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು ಬಿಜೆಪಿ ಸರಕಾರದ ದುರಾಡಳಿತದದ ಬಗ್ಗೆ ಘೋಷಣೆಗಳನ್ನು ಕೂಗಿದ್ದಾರೆ. ಬೆಳ್ತಂಗಡಿಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಆರಂಭವಾದ ಪ್ರತಿಭಟನೆ ಆರಂಭವಾಗಿ ಶಾಸಕರ ಶ್ರಮಿಕ ಕಚೇರಿ ವರೆಗೆ ಘೋಷಣೆಗಳನ್ನು ಕೂಗುತ್ತಾ ಸಾಗಿದರು ಈ ನಡುವೆ ಪೊಲೀಸರು ಮಾಜಿ ಶಾಸಕ ವಸಂತ ಬಂಗೇರ ಅವರನ್ನು ತಡೆಯಲು ಮುಂದಾದಾಗ ಪೊಲೀಸರನ್ನೇ ತಳ್ಳಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದ್ದು, ಕಮಿಷನ್ ರೂಪದಲ್ಲಿ ಕಾಮಗಾರಿ ನಡೆಯುತ್ತಿದೆ. ತಕ್ಷಣ ಸರಕಾರ ಮಧ್ಯಪ್ರವೇಶಿಸಿ 15 ದಿನಗೊಳಗೆ ಸೂಕ್ತ ಲೆಕ್ಕ ನೀಡುವಂತೆ ಮಾಜಿ ಶಾಸಕ ವಸಂತ ಬಂಗೇರ ಅವರು ಆಗ್ರಹಹಿಸಿದರು.

ಪ್ರತಿಭಟನೆಯಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ.ಗೌಡ, ಶೈಲೇಶ್ ಕುಮಾರ್ ಕುರ್ತೋಡಿ, ಜಿ.ಪಂ. ಸದಸ್ಯರಾದ ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಯುತ್ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ತಾ.ಪಂ. ಸದಸ್ಯರಾದ ಪ್ರವೀಣ್ ಕುಮಾರ್, ಕೇಶವತಿ, ನ್ಯಾಯವಾದಿ ಮನೋಹರ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಶರತ್, ಮುಸ್ತಾರ್ ಜಾನ್, ಅಶ್ರಫ ನೆರಿಯಾ ಮತ್ತಿತರು ಉಪಸ್ಥಿತರಿದ್ದರು.

- Advertisement -

Related news

error: Content is protected !!