Tuesday, August 18, 2026
spot_imgspot_img
spot_imgspot_img

ಬೆಳ್ತಂಗಡಿ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

- Advertisement -
- Advertisement -

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು ಪೊಲೀಸ್‌ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!