Friday, June 5, 2026
spot_imgspot_img
spot_imgspot_img

ಬೆಳ್ತಂಗಡಿ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಬೆಳ್ತಂಗಡಿ: ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ತೋಟದಲ್ಲಿ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್‌ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ ಸೇರಿದಂತೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!