Monday, July 27, 2026
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!

- Advertisement -
- Advertisement -

ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ.

ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅವರಿದ್ದ ದ್ವಿಚಕ್ರ ವಾಹನ ತೋಟತ್ತಾಡಿ ಗ್ರಾಮದ ಮೂರ್ಜೆಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದಾರೆ

ಅವರಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸಂತೋಷ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!