Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಸೌಜನ್ಯ ‌ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ; ಹೈಕೋರ್ಟ್‌‌ನಲ್ಲಿ ಇಂದು ವಿಚಾರಣೆ

- Advertisement -
- Advertisement -

ಬೆಳ್ತಂಗಡಿ: ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಲಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆಪ್ಟೆಂಬರ್ 8ರಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

- Advertisement -

Related news

error: Content is protected !!