Thursday, May 2, 2024
spot_imgspot_img
spot_imgspot_img

ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ಕೆಡವಿದ ಅರಣ್ಯಾಧಿಕಾರಿಗಳು; ಅಧಿಕಾರಿ ಹಾಗೂ ಶಾಸಕರ ಮಧ್ಯೆ ಮಾತಿನ ಚಕಮಕಿ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ, ಪೊಲೀಸರಿಂದ ಸರ್ಪಗಾವಲು

- Advertisement -G L Acharya panikkar
- Advertisement -

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕಿತ್ತೆಸೆದಿದ್ದ ಘಟನೆ ನಡೆದಿತ್ತು.

ಕಳೆಂಜ ಗ್ರಾಮದ ಅಮ್ಮಿಡ್ಕ ಕುದ್ದಮನೆ ದೇವಣ್ಣ ಗೌಡ ಹಾಗೂ ಕುಟುಂಬಸ್ಥರು ಈ ಜಮೀನಿನಲ್ಲಿ ಈ ಹಿಂದಿನಿಂದಲೂ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ಜಾಗದಲ್ಲಿ ಇದೀಗ ಅವರ ಕುಟುಂಬಸ್ಥರು ಹೊಸದಾಗಿ ಮನೆ ನಿರ್ಮಿಸಲು ಮುಂದಾಗಿದ್ದರು. ಮನೆ ಪಂಚಾಂಗದ ಕೆಲಸ ಆರಂಭಿಸಿದ್ದರು. ಈ ನಡುವೆ ಕಳೆದ ವಾರ ಅರಣ್ಯ ಇಲಾಖೆಯವರು 319ಸರ್ವೇ ನಂಬರ್ ರಣ್ಯ ಇಲಾಖೆಯನಲ್ಲಿದ್ದು ಇದು ಅರಣ್ಯ ಇಲಾಖೆಯ ಜಾಗ ಎಂದು ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಿದರು.

ವಿಷಯ ತಿಳಿದು ಅ.7 ರಂದು ಬೆಳ್ತಂಗಡಿ ಶಾಸಕರು ನಿಗ ವಹಿಸಿ ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಯ ಸಚಿವರ ಜೊತೆ ಫೋನ್ ಕರೆ ಮೂಲಕ ಮಾತನಾಡಿದ್ದು ಸಚಿವರು ಅಧಿಕಾರಿಗಳಿಗೆ ಯತಾಸ್ಥಿತಿ ಕಾಪಾಡಲು ಸೂಚಿಸಿದಲ್ಲದೆ ಮೇಲಾಧಿಕಾರಿಗಳಿಂದ ವರದಿ ಪಡೆದು ಬಳಿಕ ನಿರ್ಧಾರ ತೆಗೆದುಕೊಳ್ಳುವಂತೆ ಆದೇಶಿಸಿದರು.

ಇದೀಗ ಸ್ಥಳೀಯ ಶಾಸಕರು ಅರಣ್ಯ ಸಚಿವರ ಜೊತೆ ಮಾತುಕತೆ ನಡೆಸಿದ್ದರೂ ಇಂದು ಮತ್ತೆ ತಾತ್ಕಾಲಿಕವಾಗಿ ನಿರ್ಮಾಣವಾಗಿದ್ದ ಶೆಡ್ ಕೆಡವಲು ಮುಂದಾದ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಕಿಡಿಕಾರಿದರು. ಮನೆ ತೆರವಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದರು.

ಶಾಸಕ ಹರೀಶ್ ಪೂಂಜಾಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್‌ ಉಳಿಪ್ಪಾಡಿ ಗುತ್ತು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಶಾಸಕ ಭರತ್‌ ವೈ ಶೆಟ್ಟಿ ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಸಾಥ್ ನೀಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಕೆ.ಎಸ್.ಆರ್.ಪಿ.ಯ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಮೂರು ಕೆ.ಎಸ್.ಆರ್.ಪಿ ತುಕಡಿ ಹಾಗೂ ಬೆಳ್ತಂಗಡಿ ಸರ್ಕಲ್‌ ಇನ್ಸ್‌ಕ್ಟರ್ ನಾಗೇಶ್ ಕದ್ರಿ ಮತ್ತು ಬೆಳ್ತಂಗಡಿ, ಧರ್ಮಸ್ಥಳ, ಪುಂಜಾಲಕಟ್ಟೆ, ವೇಣೂರು ಸಬ್ ಇನ್ಸ್‌ಕ್ಟರ್‌ ಹಾಗೂ ಸಿಬ್ಬಂದಿಗಳು ಮೊಕ್ಕಂ ಹೂಡಿದ್ದಾರೆ.

- Advertisement -

Related news

error: Content is protected !!