Sunday, June 21, 2026
spot_imgspot_img
spot_imgspot_img

ಬೆಳ್ತಂಗಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಯುವಕನ ಅಸಭ್ಯ ವರ್ತನೆ; ಆರೋಪಿ ಕಬೀರ್‌ನ ಬಂಧನ

- Advertisement -
- Advertisement -

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚಾರಿಸುತ್ತಿದ್ದ ಸರಕಾರಿ ಬಸ್ ನಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿ ಕಬೀರ್(35) ಎನ್ನಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!