Monday, August 31, 2026
spot_imgspot_img
spot_imgspot_img

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್‌ -ಬೈಕ್ ನಡುವೆ ಅಪಘಾತ; ಹುಟ್ಟುಹಬ್ಬದಂದೇ ದುರಂತ ಅಂತ್ಯ ಕಂಡ ಯುವಕ

- Advertisement -
- Advertisement -

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ ಬೈಕಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಗರ್ಡಾಡಿ ಬಳಿ ನಡೆದಿದೆ.

ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದೀಕ್ಷಿತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಧರ್ಮಸ್ಥಳದಿಂದ ಹುಬ್ಬಳ್ಳಿಗೆ ತೆರಳುತಿದ್ದ ಬಸ್‌ ಗರ್ಡಾಡಿ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ಸಮಯಗಳ ಹಿಂದೆ ಇದೇ ಜಾಗದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!