- Advertisement -
- Advertisement -




ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್ಸೊಂದರ ಟಯರ್ ಕಳಚಿನಿಂತ ಘಟನೆ ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್-ಕುಂಟಿನಿ ರಸ್ತೆಯಲ್ಲಿ ನಡೆದಿದೆ.
ಕಳೆದೆರಡು ದಿನಗಳ ಹಿಂದೆ ಮುಂಡಾ ಸಮೀಪದ ಸೋಮಂತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿ ಮೇಲೆ ಹತ್ತಿದ ಘಟನೆ ಬೆನ್ನಲ್ಲೆ ಈ ಅವಘಡ ನಡೆದಿದೆ. ಧರ್ಮಸ್ಥಳ ಕೊಲ್ಲಿ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಟಯರ್ ಕಳಚಿ ನಿಂತ ಆತಂಕಕಾರಿ ಘಟನೆ ನಡೆದಿದೆ.
ಅವಘಡದ ಬಳಿಕ ಕೆಎಸ್‌ಆರ್‌ಟಿಸಿ ಸಮರ್ಪಕವಾಗಿ ಬಸ್ ನೀಡದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಹೆಚ್ಚುವರಿ ಬಸ್ ಹಾಗೂ ಇತರ ಬೇಡಿಕೆ ಮುಂದಿಟ್ಟು ಬುಧವಾರ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೆ ಮತ್ತೆ ಬಸ್ ಟಯರ್ ಸಂಪೂರ್ಣ ಕಳಚಿ ಬೀಳುವ ಮೂಲಕ ಬಸ್‌ನ ಕಳಪೆ ನಿರ್ವಹಣೆಯ ಬಗ್ಗೆ ಕಳವಳ ಮೂಡಿಸಿದೆ.
- Advertisement -








