Saturday, June 20, 2026
spot_imgspot_img
spot_imgspot_img

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ವಿಶ್ವನಾಥ ರಾವ್ (45) ಎಂದು ಗುರುತಿಸಲಾಗಿದೆ.

ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕ ಆಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕರೆತಂದ ವೇಳೆ ಮೃತಪಟ್ಟಿರುತ್ತಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!