Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ : ಸ್ಟೇಶನ್ ಜಾಮೀನಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜರವರ ಮನೆಗೆ ತೆರಳಿದ್ದು ನಿನ್ನೆ ಹೈ ಡ್ರಾಮವೇ ಬೆಳ್ತಂಗಡಿಯಲ್ಲಿ ನಡೆದಿದೆ, ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್ ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ಪೊಲೀಸರಲ್ಲಿ ವಿನಂತಿಸಿಕೊಂಡಿದ್ದಾರೆ.

ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ್‌ ಅವರು ವಿಚಾರಣೆಗೆ ಹಾಜರಾಗುವಂತೆ ಹರೀಶ್ ಪೂಂಜರಿಗೆ ನೋಟಿಸ್ ನೀಡಿ ತೆರಳಿದ್ದು, ನೋಟಿಸ್‌ ನೀಡಿದ ಹಿನ್ನೆಲೆ ಶಾಸಕ ಹರೀಶ್ ಪೂಂಜ ರವರು ಬಿಜೆಪಿಯ ಘಟಾನುಘಟಿಗಳ ಜೊತೆಗೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದರು..

ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.

- Advertisement -

Related news

error: Content is protected !!