Tuesday, July 23, 2024
spot_imgspot_img
spot_imgspot_img

ಬೆಳ್ತಂಗಡಿ : ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ಬೆಳ್ತಂಗಡಿ: ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ ವಿವಾಹವಾಗಿ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿಸಿ ಗೌರವಿಸಿದ್ದರು. ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!