Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ನರ್ಸಿಂಗ್‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!!

- Advertisement -
- Advertisement -

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮ (19) ಅನಾರೋಗ್ಯದಿಂದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿಯೇ ಇದ್ದಳು. ಆದರೆ ಈ ವೇಳೆ ಲೋ ಬಿಪಿಯಿಂದಾಗಿ ಹೃದಯಾಘಾತಕ್ಕೊಳಗಾಗಿ ಆ. 13 ರಂದು ಸಾವನ್ನಪ್ಪಿದ್ದಾಳೆ.

ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

- Advertisement -

Related news

error: Content is protected !!