Thursday, June 18, 2026
spot_imgspot_img
spot_imgspot_img

ಬೆಳ್ತಂಗಡಿ: ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಟಿಪ್ಪರ್ ಜಖಂ

- Advertisement -
- Advertisement -
This image has an empty alt attribute; its file name is Bajaj-add-1024x718.jpg

ಬೆಳ್ತಂಗಡಿ: ಜೆಸಿಬಿ ಸಾಗಿಸುತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಗೆ ಎದುರುಗಡೆಯಿಂದ ಬರುತಿದ್ದ ಟೆಂಪೋ ಟ್ರಾವೆಲರ್ ವಾಹನವು ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು ವಾಹನಗಳು ಸುಮಾರು 1 ಗಂಟೆಗಿಂತಲೂ ಹೆಚ್ಚು ಹೊತ್ತು, ಕಿಲೋ ಮೀಟರ್ ಗಟ್ಟಲೆ ಸಾಲು ಗಟ್ಟಿ ನಿಂತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!