Saturday, May 4, 2024
spot_imgspot_img
spot_imgspot_img

ಬೆಳ್ತಂಗಡಿ: ರಸ್ತೆ ಬದಿಯ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

- Advertisement -G L Acharya panikkar
- Advertisement -

ಬೆಳ್ತಂಗಡಿ: ರಸ್ತೆ ಬದಿಯ ಗೂಡಂಗಡಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ನಡೆದಿದೆ.

ವ್ಯಾಪಾರಿ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಜೀಜ್ ಎಂದು ಗುರುತಿಸಲಾಗದೆ.

ಇವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಇಲ್ಲಿ ಕಾರ್ಯನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಜೀಜ್ ಬೆಳಿಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ.

ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!