Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರ ಕಳವು ಯತ್ನ; ಲಕ್ಷಾಂತರ ಮೌಲ್ಯದ ಮರ, ಯಂತ್ರೋಪಕರಣ ಜಪ್ತಿ

- Advertisement -
- Advertisement -

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೊತ್ತು ಸಹಿತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯ ಆಧಾರದ ಮೇಲೆ, ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ತ್ಯಾಗರಾಜ್.ಟಿ.ಎಂ. ನೇತೃತ್ವದ ತಂಡವು ಏಪ್ರಿಲ್ 16 ರ ಸಂಜೆ ದಾಳಿ ನಡೆಸಿ ಅಕ್ರಮವಾಗಿ ಕಡಿದ ಮರಗಳು ಮತ್ತು ಉಪಕರಣಗಳನ್ನು ವಶಪಡಿಸಿಕೊಂಡಿದೆ.

ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ, ಏಪ್ರಿಲ್ 19 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!