Saturday, August 29, 2026
spot_imgspot_img
spot_imgspot_img

ಬೆಳ್ತಂಗಡಿ: ಉಯ್ಯಾಲೆಯ ಹಗ್ಗ ಸಿಲುಕಿ ಬಾಲಕ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಆಡುತ್ತಿದ್ದ ಸಂದರ್ಭ ಕುತ್ತಿಗೆಗೆ ಉಯ್ಯಾಲೆಯ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜು.16ರಂದು ಸಂಜೆ ವೇಳೆ ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ.

ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಅದರ ಹಗ್ಗ ಸಿಲುಕಿ ಕೆಲಗೆ ಬಿದ್ದಿದ್ದು, ಅದನ್ನು ನೋಡಿದ ಬಾಲಕನ ತಂಗಿ ತಂದೆಗೆ ತಿಳಿಸಿದ್ದು, ತಕ್ಷಣ ಬಾಲಕನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ದಾರಿಮದ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇನ್ನು ಮೃತ ಬಾಲಕನ ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!