Sunday, June 7, 2026
spot_imgspot_img
spot_imgspot_img

ಬೆಳ್ತಂಗಡಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು..!

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದಿಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು, ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್‌ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪಂಜಾಬ್‌ನ ಜಲಂದರ್‌ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೇ 17 ರ ರಾತ್ರಿಯೇ ಮನೆ ಮಂದಿ ಪಂಜಾಬ್‌ಗೆ ತೆರಳಿದ್ದಾರೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ ಎಂದು ವರದಿಯಾಗಿದೆ. ಆದರೆ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ತಂದೆ ಆರೋಪ ಮಾಡುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!