Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25 ರಂದು ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ಎಂಬವರು ಸಾವನ್ನಪ್ಪಿದ್ದಾರೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!