Sunday, June 21, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ!

- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆಯ ಸಂಬಂಧಿ ಅತ್ಯಾಚಾರವೆಸಗಿರುವ ಘಟನೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪುಂಡೈ ಬನ ಮನೆ ಎಂಬಲ್ಲಿ ನಡೆದಿದೆ.

ಆಗಾಗ ಮನೆಗೆ ಬಂದು ಹೋಗುತ್ತಿದ್ದ ಆಕೆಯ ಸಂಬಂಧಿ ಪ್ರವೀಣ್ ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಬಾಲಕಿಯನ್ನು ವಿಚಾರಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!