- Advertisement -
- Advertisement -





ನಿಡ್ಲೆ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪಾರ್ಪಿಕಲ್ ಸೇತುವೆ ಸಮೀಪದ ತಿರುವಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು (ಕೋಲಾರ-ಮುಳಬಾಗಿಲು) ದೀಪಕ್ ಜಿ. ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕಾರೊಂದು ಓವರ್ಟೇಕ್ ಮಾಡುವ ಸಮಯದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿದ್ದು, ಎದುರುಗಡೆಯಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ನೆಲ್ಯಾಡಿ ಆಸ್ಪತ್ರೆಗೆ ಸಾಗಿಸಲಾದರೂ ಜೀವವನ್ನು ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -








