Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ; ಓರ್ವ ಮೃತ್ಯು

- Advertisement -
- Advertisement -

ಬೆಳ್ತಂಗಡಿ : ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ನಿತೇಶ್(19) ಮೃತಪಟ್ಟವರು. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಇವರಿಬ್ಬರು ಮಾ.28ರಂದು ರಾತ್ರಿ ಸುಮಾರು 12:30ಕ್ಕೆ ಕಾರ್ಯಕ್ರಮ ಮುಗಿಸಿ ಬೈಕಿನಲ್ಲಿ ವಾಪಸ್‌ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೈಕ್ ಸ್ಕಿಡ್ ಆಗಿ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.

ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!