Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್‌; ಇಬ್ಬರು ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಬೈಕ್‌ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆನಾರಾವಿ ಕುತ್ತೂರಿನಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೈಕ್‌ ಸವಾರ ಹಾಗೂ ಸಹಸವಾರ ಬೆಳ್ಮಣ್‌‌ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ತೂರು ಪುರುಷಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೇಣೂರು ಪೋಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!