Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆ!

- Advertisement -
- Advertisement -

ಬೆಳ್ತಂಗಡಿ : ದಿ.14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.

ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿತ್ತು. ಇದೀಗ ಸುಮಂತ್ ಶವ ಮೃತದೇಹ ಪತ್ತೆಯಾದ ಕೆರೆಯ ನೀರನ್ನು ಖಾಲಿ ಮಾಡಿ ಪರಿಶೀಲನೆ ನಡೆಸಿದಾಗ ಕತ್ತಿ ಮತ್ತು ಟಾರ್ಚ್ ಲೈಟ್ ದೊರೆತಿದೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!