Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ : ಹೆದ್ದಾರಿ ಬಳಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ; ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಕಾರು ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡವರು. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಚಾಲಕ ಹರ್ಷನ್ ಮನೋಜ್ ಎಂಬಾತ ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಇಬ್ಬರು ಕೂಡ ಕಾರಿನ ಮುಂದಿನ ಗಾಜಿಗೆ ಬಿದ್ದು ಪಕ್ಕದ ಕಚ್ಚಾ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ. ಸೀನಪ್ಪ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಮೇಶ್ ಅವರ ಎಡಕಾಲು, ತಲೆ, ಎಡಗೈಗೆ ಗುದ್ದಿದ ಗಾಯವಾಗಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಮೇಶ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!