Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ಸುಳ್ಳು ಸುದ್ದಿ ಹಬ್ಬಿಸಿದ ಆರೋಪ; ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಟ್ಟಣ್ಣನವರ್‌ ಮತ್ತು ತಿಮರೋಡಿ ಸಮಾಜದ ಸೌಹಾರ್ದ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ದೂರು ನೀಡಿದ್ದಾರೆ.

ಆ.30 ರಂದು ಧರ್ಮಸ್ಥಳ ಗ್ರಾಮದ ಪ್ರವೀಣ ಕೆ. ಆರ್ ಎಂಬವರು ಬೆಳ್ತಂಗಡಿಗೆ ಬಂದಿರುವ ಸಮಯ ಸಂಜೆ ತನ್ನ ಮೊಬೈಲ್ ನಲ್ಲಿ ಯೂಟ್ಯೂಬ್ ವೀಕ್ಷಿಸುತ್ತಿರುವ ವೇಳೆ ಗಿರೀಶ್ ಮಟ್ಟಣ್ಣನವರ್‌ರವರು ಮದನ್ ಬುಗುಡಿರವರ ಜೊತೆ ನಿಂತುಕೊಂಡು ಮಾಧ್ಯಮದ ಮುಂದೆ ಮಾತನಾಡುತ್ತಾ ಸಮಾಜದ ಶಾಂತಿ ಸೌಹಾರ್ದತೆಯನ್ನು ನಾಶಪಡಿಸುವ ಉದ್ದೇಶದಿಂದ ಮತ್ತು ಧಾರ್ಮಿಕ ಭಾವನೆಯನ್ನು ಕೆಡಿಸುವ ಉದ್ದೇಶದಿಂದ ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರು ಸೇರಿಕೊಂಡು ಹಲವಾರು ದಿನಗಳಿಂದ ಬೇರೆ ಬೇರೆ ವ್ಯಕ್ತಿಗಳನ್ನು ಬ್ಲಾಗರ್‌ಗಳನ್ನು ಕರೆದುಕೊಂಡು ಬಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರವೀಣ ಕೆ. ಆರ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 100/2025 ಕಲಂ: 204, 319(2)353(2) ಜೊತೆಗೆ 3(5) BNS ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!