Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತರ ಮೇಲೆ ಹಲ್ಲೆ ಆರೋಪ: ಜುವೆಲ್ಲರ್ಸ್‌ ನ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ನೀಡಿದ ದೂರಿನ ಆಧಾರದ ಮೇಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುವೆಲ್ಲರ್ಸ್‌ ನ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿ.15ರಂದು ಸಂಜೆ, ಬಾಲಕ ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಜುವೆಲ್ಲರ್ಸ್‌ ಒಂದರ ಹಿಂಭಾಗಕ್ಕೆ ಬಹಿರ್ದೆಸೆಗೆ ತೆರಳಿದ್ದ ವೇಳೆ, ಜ್ಯುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಿ, ಮೂವರನ್ನೂ ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2025 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)–2023ರ ಕಲಂ 126(2) ಹಾಗೂ 115(1) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೊಂದೆಡೆ, ಈ ಘಟನೆಯ ಸಂಬಂಧ ಜುವೆಲ್ಲರ್ಸ್‌ ಸಿಬ್ಬಂದಿ ಕೂಡ ಡಿ.17ರಂದು ಬಾಲಕರ ವಿರುದ್ಧ ಪ್ರತಿದೂರು ದಾಖಲಿಸಿದ್ದು, ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!