Monday, October 19, 2026
spot_imgspot_img
spot_imgspot_img

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಸಾವು!

- Advertisement -
- Advertisement -

ಬೆಳ್ತಂಗಡಿ: ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ(20) ಮೃತ ವಿದ್ಯಾರ್ಥಿನಿ.

ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ರಿನ್ಸಿ ಕೊನೆಯುಸಿರೆಳೆದಿದ್ದಾಳೆ.

ಬೆಳ್ತಂಗಡಿಯ ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ರಿನ್ಸಿಯ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!