Thursday, September 17, 2026
spot_imgspot_img
spot_imgspot_img

ಬೆಳ್ತಂಗಡಿ: ಲಾಯಿಲ ಅಕ್ರಮ ಕಟ್ಟಡದ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ ಪರಿವರ್ತನೆ ಮಾಡಿ, ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಸೇರಿದಂತೆ ಇತರರ ವಿರುದ್ಧ ಲಾಯಿಲ ಗ್ರಾಮದ ನಿವಾಸಿ ಅನ್ಸಾರ್ ಎಂಬವರು ಸೆ.16 ರಂದು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ‌ ಗ್ರಾಮದ ನಿವಾಸಿ ಅನ್ಸಾರ್ ಎಂಬವರು ನೀಡಿರುವ ದೂರಿನಲ್ಲಿ, ಲಾಯಿಲ ಗ್ರಾಮದ ರಾಘವೇಂದ್ರ ನಗರದಲ್ಲಿ ಮೊಹಮ್ಮದ್ ರಫೀಕ್ ಬಿನ್ ಕರೀಂ ಮೈನಾ ಎಂಬವರು ವಾಣಿಜ್ಯ ಉದ್ದೇಶಕ್ಕಾಗಿ ಬಹುಮಹಡಿ ಕಟ್ಟಡ ನಿರ್ಮಿಸುತ್ತಿದ್ದು, ಈ ಕಟ್ಟಡಕ್ಕೆ ಸಮರ್ಪಕ ಪರವಾನಿಗೆ ಪಡೆದಿಲ್ಲ. ಗೃಹ ನಿರ್ಮಾಣದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಅದರಲ್ಲಿ ವಾಣಿಜ್ಯ ಉದ್ದೇಶದ ಕಟ್ಟಡ ಕಟ್ಟಲಾಗುತ್ತಿದೆ.

ಈ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದೀಗ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಡೋರ್ ನಂಬರ್ ಹಾಗೂ ವಿದ್ಯುತ್ ಸಂಪರ್ಕಕ್ಕೆ ಎನ್‌ಒಸಿ ನೀಡುವ ಬಗ್ಗೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ದೂರನ್ನು ಲೋಕಾಯುಕ್ತರು ಸ್ವೀಕರಿಸಿದ್ದು, ಪ್ರಕರಣದ ಬಗ್ಗೆ ಲೋಕಾಯುಕ್ತರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ತಿಳಿದುಬರಬೇಕಿದೆ.

- Advertisement -

Related news

error: Content is protected !!