Monday, August 10, 2026
spot_imgspot_img
spot_imgspot_img

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ – ವ್ಯಕ್ತಿಯ ವಿರುದ್ಧ ಎನ್‌ಡಿಪಿಎಸ್ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಆ.9ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ವೇಣೂರು ಮೇಲಿನ ಪೇಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿದೆ. ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ನಿವಾಸಿ ಮಹಮ್ಮದ್ ಆಸೀಫ್ (35) ಎಂದು ತಿಳಿದುಬಂದಿದೆ.

ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದು, ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 27(b) ಮತ್ತು 22(a) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!