Wednesday, June 17, 2026
spot_imgspot_img
spot_imgspot_img

ಬೆಳ್ತಂಗಡಿ: ಮುಸ್ಲಿಂ ಯುವಕನಿಗೆ ಹಲ್ಲೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಹಲ್ಲೆಗೊಳಗಾದ ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್ ನೀಡಿದ ದೂರಿನಂತೆ ತೋಟತ್ತಾಡಿಯ ದಿನೇಶ್, ನಿತೇಶ್ ಮತ್ತು ಮುಂಡಾಜೆಯ ಸಚಿನ್ ಮತ್ತು ಸೋಮಂತಡ್ಕದ ಅವಿನಾಶ್ ಯಾನೆ ರಾಹುಲ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

‍ಜಾಹೀರ್‌ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ವೇಳೆ ತಂಡವೊಂದು ಆಗಮಿಸಿ ಜಾಹೀರ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದು, ಈ ಪ್ರಕರಣ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು.

- Advertisement -

Related news

error: Content is protected !!