Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ.

ಮೃತಪಟ್ಟ ಚಾಲಕನನ್ನು ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಎಂದು ಗುರುತಿಸಲಾಗಿದೆ.

ಶರತ್ ಕುಮಾರ್ ಅವರು ಪ್ರತಿ ದಿನದಂತೆ ಇಂದು( ಜೂ.3) ಬೆಳಿಗ್ಗೆಯೂ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು.

ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು. ಶರತ್ ಕುಮಾರ್ ತಂದೆ ರಘುರಾಮ ಮಡಿವಾಳ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!