Monday, May 6, 2024
spot_imgspot_img
spot_imgspot_img

ಬೆಳ್ತಂಗಡಿ: ಕಳವಾಗಿದ್ದ ಚಿನ್ನಾಭರಣ ಬೆಳ್ಳಂಬೆಳಗ್ಗೆ ಮನೆಯಂಗಳದಲ್ಲಿ ಪತ್ತೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ.

ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆ ನಿವಾಸಿ ಪ್ರಮೋದ ವಿ.ಭಿಡೆ ಅವರು ಮನೆಯ ಸಾರಣೆ ಹಾಗೂ ಪೈಂಟಿಂಗ್ ಕೆಲಸವನ್ನು ಕಾರ್ಮಿಕರ ಮೂಲಕ ಜು.5ರಂದು ಆರಂಭಿಸಿದ್ದು, ಇದಕ್ಕೆ ಮೊದಲು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಇಟ್ಟು, ಕೋಣೆಗೆ ಬೀಗ ಹಾಕದೆ ಇರಿಸಿದ್ದರು. ಜು.19ರಂದು 10ರಿಂದ 13 ಮಂದಿ ಕಾರ್ಮಿಕರು ಕಾಮಗಾರಿ ಮುಗಿಸಿ ತೆರಳಿದ್ದರು.

ಸೆ.12ರಂದು ಕಾರ್ಯಕ್ರಮಕ್ಕೆ ತೆರಳುವ ವೇಳೆ ಆಭರಣ ಧರಿಸಲು ಆಭರಣ ಇರಿಸಲಾಗಿದ್ದ ಸ್ಥಳಕ್ಕೆ ಹೋಗಿ ನೋಡಿದಾಗ ಸುಮಾರು 5 ಲಕ್ಷ ರೂ. ಮೌಲ್ಯದ 122 ಗ್ರಾಂ. ಚಿನ್ನಾಭರಣ ಕಳವಾಗಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪ್ರಕರಣದ ಕುರಿತು ಕೆಲವರನ್ನು ಠಾಣೆಗೆ ಕರೆಯಿಸಿ ತನಿಖೆ ನಡೆಸಿದ್ದರು.

ತನಿಖೆ ಚುರುಕುಗೊಳ್ಳುತ್ತಿದ್ದಂತೆ ಕಳವಾದ ಚಿನ್ನಾಭರಣ ಶುಕ್ರವಾರ ಬೆಳಗ್ಗೆ ಪ್ರಮೋದ್ ವಿ. ಭಿಡೆಯವರ ಮನೆಯಂಗಳದಲ್ಲೇ ಪತ್ತೆಯಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಠಾಣೆಯ ಪೊಲೀಸರು ಹಲವು ಮಂದಿಯನ್ನು ವಿಚಾರಣೆ ನಡೆಸಿದ್ದು, ಕೆಲವು ಕಾರ್ಮಿಕರನ್ನು ಕರೆಯಿಸಿ ವಿಚಾರಣೆಯನ್ನು ನಡೆಸಿದ್ದರು. ಇನ್ನು ಕೆಲವರು ಊರಿನಲ್ಲಿ ಇಲ್ಲದೇ ಇದ್ದು, ಅವರನ್ನು ಕೂಡ ಕರೆಯಿಸಿ ವಿಚಾರಣೆ ನಡೆಸಲು ಸಿದ್ಧತೆಯನ್ನೂ ನಡೆಸಿಕೊಂಡಿದ್ದರು. ತನಿಖೆ ಚುರುಕುಗೊಳ್ಳುತ್ತಿದ್ದಂತೆ ಕಳವಾದ ಚಿನ್ನಾಭರಣ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

ಕಳವು ಮಾಡಿದವರು ವೃತ್ತಿಪರ ಕಳ್ಳರಲ್ಲ ಎಂದು ಹೇಳಬಹುದು. ಕಣ್ಣಿಗೆ ಸಿಕ್ಕಿದ್ದನ್ನು ಯಥಾವತ್ ದೋಚಿರುವ ಸಾಧ್ಯತೆಯೇ ಹೆಚ್ಚಿರುವಂತೆ ಕಂಡುಬರುತ್ತಿದೆ. ಚಿನ್ನ ಕದ್ದೊಯ್ದ ಕಳ್ಳರು ಪೊಲೀಸರ ವಿಚಾರಣೆಗೆ ಹೆದರಿ ಚಿನ್ನಾಭರಣವನ್ನು ಮರಳಿಸಿರಬಹುದು ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!