Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಚಿರತೆ ದಾಳಿ-ಅಡಿಕೆ ಮರವೇರಿ ಜೀವ ಉಳಿಸಿಕೊಂಡ ವ್ಯಕ್ತಿ!

- Advertisement -
- Advertisement -

ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.

ಮಂಜಪ್ಪ ನಾಯ್ಕ ಇಂದು ಬೆಳಗ್ಗೆ 8:15ರ ಸುಮಾರಿಗೆ ಮನೆಯ ಅಂಗಳದಲ್ಲಿದ್ದ ವೇಳೆ ಚಿರತೆಯೊಂದು ಅವರ ಮೇಲೆ ದಾಳಿ ನಡೆಸಿದೆ. ತಕ್ಷಣ ಹತ್ತಿರದ ಅಡಿಕೆ ಮರವನ್ನೇರಿ ಅವರು ಜೀವ ಉಳಿಸಿಕೊಂಡಿದ್ದಾರೆ. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!