Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

- Advertisement -
- Advertisement -

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಿಂದ ಮನನೊಂದು ವ್ಯಕ್ತಿಯೋರ್ವರು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟಿವಿನಲ್ಲಿ ನಡೆದಿದೆ.

ಇಂದಬೆಟ್ಟು ಗ್ರಾಮದ ಕಲ್ಲಾಜೆ ಶಾಲೆಯ ಹತ್ತಿರ ವಾಸವಿರುವ ವಸಂತ ಪೂಜಾರಿ (62) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ವಸಂತ ಪೂಜಾರಿಯವರು ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಹಿಂಬದಿರುವ ಕಬ್ಬಿಣದ ಕೊಕ್ಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!