- Advertisement -
- Advertisement -



ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿರುತ್ತಾರೆ. ಈ ಬಗ್ಗೆ ದೂರನ್ನು ಸ್ವೀಕರಿಸಿಕೊಂಡು ಧರ್ಮಸ್ಥಳ ಠಾಣೆಯಲ್ಲಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.
- Advertisement -








