Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಜಾತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ- ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದ್ದು, ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾ. 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ.

ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಮಾತ್ರವಲ್ಲದೇ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಬಾಲಕನನ್ನು ಬಲವಂತವಾಗಿ ಅಪಹರಿಸಿದ ಆರೋಪಿಗಳು, ಮೊಬೈಲ್‌ನಲ್ಲಿ ಬಲವಂತವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಿಸಿದ್ದಾರೆ ಎನ್ನಲಾಗಿದೆ.

ಬಾಲಕ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಲಕ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341 (ಅಕ್ರಮ ತಡೆ), 323 (ಹಲ್ಲೆ), 363 (ಅಪಹರಣ), 504 (ನಿಂದನೆ) ಮತ್ತು 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!