Saturday, August 15, 2026
spot_imgspot_img
spot_imgspot_img

ಬೆಳ್ತಂಗಡಿ: ವೃದ್ಧೆಯ ಕೈಯಿಂದ ಚಿನ್ನ ಕಿತ್ತುಕೊಂಡ ದುಷ್ಕರ್ಮಿ: ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ದೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಆ.14 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ. ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ.

ಆರೋಪಿ, ಅವ್ವಮ್ಮ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ (45) ಅವರು ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 309(6) BNS-2023ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!