Monday, September 7, 2026
spot_imgspot_img
spot_imgspot_img

ಬೆಳ್ತಂಗಡಿ: ಯುವತಿ ನಾಪತ್ತೆ; ದೂರು ದಾಖಲು!

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದ ಯುವತಿಯೊಬ್ಬರು ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಣೆಯಾದ ಯುವತಿ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21)ಎನ್ನಲಾಗಿದೆ.

ಕಳೆದ ಒಂದು ವರ್ಷದಿಂದ ರೇಣುಕಾ ಬೆಳ್ತಂಗಡಿಯ ದುರ್ಗಾ ಕ್ಲಿನಿಕ್ ನಲ್ಲಿ ಕೆಲಸದಲ್ಲಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ತಾಯಿಯ ಆರೈಕೆಗೆಂದು ಮನೆಯಲ್ಲಿಯೇ ಇದ್ದರು.

ಅ.25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.

- Advertisement -

Related news

error: Content is protected !!