Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು!

- Advertisement -
- Advertisement -
driving

ವೇಣೂರು: ತಾಲೂಕಿನ ವೇಣೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿ ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ(60) ಎನ್ನಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಸ್ಥಳೀಯರು!

ಕುಡಿದು ಗಲಾಟೆಯಾಗಿ ಬಳಿಕ ಸಂಜೀವ ಶೆಟ್ಟಿಯ ಮಾವನ ಮಗ ಶ್ರೀಶ ಶೆಟ್ಟಿಯೇ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪರಾರಿಯಾಗಿದ್ದ ಆರೋಪಿಯ ಜಾಡು ಹಿಡಿದ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಶಿವಕುಮಾರ್ ನೇತೃತ್ವದ ಪೋಲೀಸರ ತಂಡ, ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಉಜಿರೆ ಸಮೀಪದ ಸೋಮಂದಡ್ಕ ಅಂಗಡಿಯ ಬಳಿ ವಶಕ್ಕೆ ಪಡೆದಿದ್ದಾರೆ. ಉನ್ನತ ಅಧಿಕಾರಿ ಎಎಸ್ ಪಿ ಶಿವಾಂಶು ರಜಪೂತ್, ಬೆರಳಚ್ಚು, ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!