Saturday, June 20, 2026
spot_imgspot_img
spot_imgspot_img

ಬೆಳ್ತಂಗಡಿ: ಹಣ ಪಾವತಿ ವಿವಾದ: ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ ವ್ಯಕ್ತಿ ಅರೆಸ್ಟ್‌..!

- Advertisement -
- Advertisement -

ಬೆಳ್ತಂಗಡಿ: ಸಾಮಾನು ಖರೀಸಿದ ಬಾಕಿಯಿರಿಸಿದ್ದ ದುಡ್ಡನ್ನು ಕೇಳಿರುವುದಕ್ಕಾಗಿ ಕೋಪಗೊಂಡು ವ್ಯಕ್ತಿಯೋರ್ವರ ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ಬಳಂಜ ಗ್ರಾಮದ ನಿವಾಸಿ ಉಮೇಶ್ ಬಂಗೇರ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕುವೆಟ್ಟು ಗ್ರಾಮದ ನಿವಾಸಿ ಸದಕುತುಲ್ಲ (50) ಎಂಬವರು ಬೆಳ್ತಂಗಡಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದು, ಜುಲೈ 9-07-2025ರಂದು ರಾತ್ರಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿರುತ್ತಾರೆ. ಜುಲೈ10-07 2025 ರಂದು ಬೆಳಿಗ್ಗಿನ ಸಮಯ ಸದಕುತುಲ್ಲರವರ ಅಂಗಡಿಗೆ ಉಮೇಶ್ ಬಂಗೇರ ಎಂಬಾತನು ಬೆಂಕಿ ಹಚ್ಚಿರುವ ಬಗ್ಗೆ ಮಾಹಿತಿ ಬಂದಿರುತ್ತದೆ.

ಕೂಡಲೇ ಅಂಗಡಿ ಮಾಲೀಕ ಸ್ಥಳಕ್ಕೆ ಬಂದು ಸ್ಥಳಿಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸಿದ್ದು, ಅಂಗಡಿಗೆ ಅಳವಡಿಸಿದ 2 ಫ್ಲೆಕ್ಸ್ ಸುಟ್ಟು ಹೋಗಿ, 10 ಪ್ಲಾಸ್ಟಿಕ್ ಉಪ್ಪಿನ ಚೀಲಗಳಿಗೆ ಹಾನಿಯಾಗಿರುತ್ತದೆ. ಅರೋಪಿ ಸಾಮಾನು ಖರೀದಿಯ ದುಡ್ಡನ್ನು ಬಾಕಿಯಿರಿಸಿದ್ದು, ಅದನ್ನು ಕೇಳಿರುವುದಕ್ಕಾಗಿ ಕೋಪಗೊಂಡು ಈ ಕೃತ್ಯವನ್ನು ಎಸಗಿರುತ್ತಾರೆ. ಇದರಿಂದ ಸದಕುತುಲ್ಲರವರಿಗೆ 3000/- ರೂ ನಷ್ಟ ಉಂಟು ಮಾಡಿರುವುದಾಗಿ ನೀಡಿದ‌ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 56/2025 ಕಲಂ: 326(f), 324(2) ಬಿಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!