Saturday, July 5, 2025
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಪೊಲೀಸ್ ದಾಳಿ; ಇಬ್ಬರ ವಿರುದ್ಧ ಪ್ರಕರಣ ದಾಖಲು..!

- Advertisement -
- Advertisement -

ಬೆಳ್ತಂಗಡಿ: ಅಂಗಡಿಯೊಂದರಲ್ಲಿ ಅಕ್ರಮವಾಗಿ ಜಾನುವಾರಿನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಜು. 2-07-2025ರಂದು ಸಂಜೆ, ಬೆಳ್ತಂಗಡಿ ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಬೆಳ್ತಂಗಡಿ ತಾಲೂಕು ಮಲವಂತಿಗೆ ಗ್ರಾಮದ ಅಬ್ದುಲ್‌ ರಜಾಕ್‌ (28) ಎಂಬವರಿಗೆ ಸಂಬಂದಪಟ್ಟ ಅಂಗಡಿಯಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಯಲ್ಲಪ್ಪ ಹೆಚ್‌ ಮಾದರ, ಪೊಲೀಸು ಉಪ-ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಒಟ್ಟು 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್‌ನೊಳಗೆ ಇರಿಸಿರುವುದು ಕಂಡುಬಂದಿರುತ್ತದೆ.

ಸೊತ್ತುಗಳನ್ನು ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾಧೀನಪಡಿಸಿ, ಆರೋಪಿಗಳಾದ ಅಬ್ದುಲ್‌ ರಜಾಕ್‌ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಬೆಳ್ತಂಗಡಿ ಮಲವಂತಿಗೆ ಗ್ರಾಮದ ಅಬ್ದುಲ್‌ ರವೂಪ್‌ (20)ಎಂಬವರ ವಿರುದ್ಧ ಜು.02-07-2025ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವದೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಿಸಿದ್ದು, ಸಹೋದರರಾದ ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ತಿಳಿದು ಬಂದಿರುತ್ತದೆ.

- Advertisement -

Related news

error: Content is protected !!