Tuesday, April 23, 2024
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ; ಇಬ್ಬರ ವಿರುದ್ದ FIR ದಾಖಲು!

- Advertisement -G L Acharya panikkar
- Advertisement -

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಸೆ.27 ರಂದು ವ್ಯಾಕ್ಸಿನೇಷನ್ ಸಂದರ್ಭದಲ್ಲಿ ಆಕೆಯ ದೇಹಸ್ಥಿತಿಯನ್ನು ಗಮನಿಸಿದ ವೈದ್ಯರು, ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದ ಸಂದರ್ಭದಲ್ಲಿ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ

ಮೇಲಂತಬೆಟ್ಟು ಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿ , 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಪ್ರಾಪ್ತ ಬಾಲಕಿಯನ್ನು ಬಲಾತ್ಕಾರವಾಗಿ ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂಬವರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಆರೋಪಿಗಳಾದ ರವೀಂದ್ರ ಹಾಗೂ ಯೋಗೀಶ ಎಂಬವರ ವಿರುದ್ದ ಫೋಕ್ಸೋ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!