Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಬೆಳ್ತಂಗಡಿಯ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ ಘಟನೆ ನಡೆದಿದ್ದು, ಬೆಳ್ತಂಗಡಿಯ ಕಡುರುದ್ಯಾವರ ನಿವಾಸಿ ಸುಮಂತ್ (28) ಮತ್ತು ಗರ್ಡಾಡಿ ನಿವಾಸಿ ನವನೀತ್ (26) ಬಂಧಿತ ಆರೋಪಿಗಳು.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಎ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ಎ.17ರಂದು ದೂರು ನೀಡಿದ್ದಾರೆ.

ದೂರಿನನ್ವಯ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಏ.18ರಂದು ಸಂಜೆ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳ ಪೈಕಿ ಸುಮಂತ್ ಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!