Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ!

- Advertisement -G L Acharya panikkar
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಲಾಯಿಲ ಗ್ರಾಮದ ಕನ್ನಾಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಪ್ರವೀಣ್ ಶೆಟ್ಟಿ (38) ಎನ್ನಲಾಗಿದೆ. ಗಾರೆ ಕೆಲಸ ಮಾಡುತಿದ್ದ ಇವರು ಕಳೆದ ಒಂದು ವರುಷದ ಹಿಂದೆ ಹೊಸ ಮನೆ ಕಟ್ಟಿ ಹೆಂಡತಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.

ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಪ್ರವೀಣ್ ಶೆಟ್ಟಿ ಅವರನ್ನು ಎಚ್ಚರಗೊಳಿಸಲು ಬೆಳಗ್ಗೆ ಅವರ ಪತ್ನಿ ಕೋಣೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಈ ವೇಳೆ ಪ್ರವೀಣ್ ಶೆಟ್ಟಿ ಅವರ ಪತ್ನಿ ಹತ್ತಿರದ ಮನೆಯಲ್ಲಿದ್ದ ತಮ್ಮನಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು ನೋಡಿದಾಗ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ ಎಸ್‌ಡಿಪಿಐ ಕಾರ್ಯಕರ್ತರು; ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ!

ಕಳೆದ ಒಂದು ವಾರಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!