Saturday, September 5, 2026
spot_imgspot_img
spot_imgspot_img

ಬೆಳ್ತಂಗಡಿ : ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ತೆರವಿಗೆ ಆದೇಶ

- Advertisement -
- Advertisement -

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ನೋಟೀಸ್ ಅಂಟಿಸಿದ್ದಾರೆ.

ಲಾಯಿಲ ಗ್ರಾಮ ಪಂಚಾಯಿತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಪ್ಪ ಎಂಬವರು ಪಡ್ಲಾಡಿ ಬಳಿ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಗಳಿಲ್ಲದೆ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕಳೆದ ಕೆಲವು ಸಮಯಗಳಿಂದ ಕೇಳಿಬಂದ ಬಗ್ಗೆ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ಜಾಗಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ವಿಚಾರವೂ ಬೆಳಕಿಗೆ ಬಂದಿದೆ. ಪಡ್ಲಾಡಿ ಬಳಿಯ ಸರ್ಕಾರಿ ಜಾಗವನ್ನು ಸಾರ್ವಜನಿಕ ಗ್ರಂಥಾಲಯ ನಿರ್ಮಾಣಕ್ಕಾಗಿ ಮೀಸಲಿಡುವಂತೆ 21-12-2023 ರಂದು ಲಾಯಿಲ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು ಎನ್ನಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸುವ ಉದ್ದೇಶ ಹೊಂದಿದ್ದ ಜಾಗದಲ್ಲಿ ಇದೀಗ ಮತ್ತೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಮತ್ತಷ್ಟು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಸ್ಥಳೀಯರು ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್.ನರಗುಂದ ಅವರ ಗಮನಕ್ಕೆ ದೂರು ಸಲ್ಲಿಸಿದ್ದು, ದೂರಿನ ಹಿನ್ನೆಲೆಯಲ್ಲಿ ತಹಶೀಲ್ದಾರ್, ಕಂದಾಯ ನಿರೀಕ್ಷಕರು ರಾಜು ಲಾಮಣಿ , ಗ್ರಾಮ ಆಡಳಿತಾಧಿಕಾರಿ ರನಿತಾ ಅವರು ಆ.24 ರಂದು ಬೆಳಗ್ಗೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳ ಪರಿಶೀಲನೆಯ ವೇಳೆ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಬಿಜೆಪಿ ಪಕ್ಷದ ಉಪಾಧ್ಯಕ್ಷ ಗಣೇಶ್ ಅವರ ತಂದೆ ರಾಜು ಮೇಸ್ತ್ರಿ, ಸಹೋದರ ಸುರೇಶ್ ಹಾಗೂ , ಮತ್ತೊಬ್ಬ ಸಹೋದರ ಸುಬ್ಬ ಅವರೊಂದಿಗೆ ಸ್ಥಳಕ್ಕೆ ಆಗಮಿಸಿ ಮನೆ ನಾನು ನಿರ್ಮಿಸುತಿದ್ದೇನೆ.ಸೂರಪ್ಪ ಅವರದ್ದಲ್ಲ ಎಂದು ಅಧಿಕಾರಿಗಳ ಮುಂದೆ ತಿಳಿಸಿದ್ದಾರೆ ,ಈ ವೇಳೆ ಮಾಹಿತಿ ಮೇರೆಗೆ ಸೂರಪ್ಪ ಅವರಿಗೆ ನೋಟೀಸ್ ನೀಡಲಾಗಿದೆ ಎಂದು ಗ್ರಾಮ ಆಡಳಿತಾಧಿಕಾರಿ ತಹಶೀಲ್ದಾರ್ ಗೆ ತಿಳಿಸಿದ್ದು ಸೂರಪ್ಪ ಅವರಲ್ಲಿ ಫೋನ್ ಮೂಲಕ ತಹಶೀಲ್ದಾರ್ ಅವರು ಸಂಪರ್ಕಿಸಿ ಮಾಹಿತಿ ಕೇಳಿದಾಗ ಮನೆ ನಾನು ನಿರ್ಮಿಸುತ್ತಿಲ್ಲ, ನೋಟೀಸ್ ಸಿಕ್ಕಿದ ನಂತರ ಕೆಲಸವನ್ನು ನಿಲ್ಲಿಸಿದ್ದೇನೆ ಎಂಬ ಉತ್ತರವನ್ನು ಅವರು ನೀಡಿದ್ದಾರೆ.

ಈ ಬೆಳವಣಿಗೆ ನಂತರ ಕಟ್ಟಡ ತೆರವುಗೊಳಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಿಂದ ಸೆ.3 ರಂದು ನೋಟೀಸ್ ಜಾರಿಗೊಳಿಸಲಾಗಿದ್ದು,. ಅಧಿಕಾರಿಗಳು ಸೆ.4 ರಂದು ಸ್ಥಳಕ್ಕೆ ತೆರಳಿದಾಗ ಸೂರಪ್ಪ ಅವರು ಸ್ಥಳಕ್ಕೆ ಬಾರದೆ ಇದ್ದಾಗ ಕಟ್ಟಡದ ಬಾಗಿಲಿಗೆ ನೋಟೀಸ್ ಅಂಟಿಸಿದಾಗ ಸ್ಥಳಕ್ಕೆ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸುಧಾಕರ್ ಬಿ.ಎಲ್ ಅವರ ಜೊತೆಯಲ್ಲಿ ಬಂದ ರಾಜು ಮೇಸ್ತ್ರಿ ಪುತ್ರ ಸುರೇಶ್ ಅವರು ಕಟ್ಟಡವನ್ನು ನಾವೇ ಕಟ್ಟಿದ್ದಾಗಿ ಹೇಳಿ ಮೂರು ದಿನಗಳೊಳಗೆ ನಾವೇ ಸಂಪೂರ್ಣ ಮನೆಯನ್ನು ತೆರವುಗೊಳಿಸುವುದಾಗಿ ಅಧಿಕಾರಿಗಳಲ್ಲಿ ಲಿಖಿತ ಹೇಳಿಕೆಯಲ್ಲಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಸೋಮವಾರದವರೆಗೆ ಕಾಲಾವಕಾಶ ನೀಡಿದ್ದಾರೆ. ಒಂದು ವೇಳೆ ಸೋಮವಾರ ಸಂಪೂರ್ಣ ಮನೆಯನ್ನು ತೆರವು ಮಾಡದಿದ್ದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಮನೆಯನ್ನು ತೆರವು ಮಾಡಿ ಸರಕಾರಿ ಜಾಗವನ್ನು ಲಾಯಿಲ ಗ್ರಾಮ ಪಂಚಾಯತ್ ಗ್ರಂಥಾಲಯ ನಿರ್ಮಿಸಲು ಹಸ್ತಾಂತರ ಮಾಡಲಿದ್ದಾರೆ.

ಬೆಳ್ತಂಗಡಿ ಕಂದಾಯ ನಿರೀಕ್ಷಕ ರಾಜು ಲಮಾಣಿ, ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ತಾರಾನಾಥ್ ನಾಯ್ಕ್,ಲಾಯಿಲ ಗ್ರಾಮ ಆಡಳಿತ ಅಧಿಕಾರಿ ರನಿತಾ, ಲಾಯಿಲ ಗ್ರಾಮ ಸಹಾಯಕ ಸತೀಶ್ ಹಾಗೂ ಬೆಳ್ತಂಗಡಿ ಪೊಲೀಸರು ಭಾಗಿಯಾಗಿದ್ದರು.

- Advertisement -

Related news

error: Content is protected !!